ಶಿವಮೊಗ್ಗ: ಗೋ ಸಾಗಾಟ ವಾಹನ ಯುವಕರ ಮೇಲೆ ಹತ್ತಿಸಿದ ಪ್ರಕರಣ:
ಗಾಯಳುಗಳನ್ನು ಭೇಟಿಯಾದ ಗೃಹ ಸಚಿವ ಆರಗ ಜ್ಞಾನೇಂದ್ರ
ಉಡುಪಿ: ತೀರ್ಥಹಳ್ಳಿಯಲ್ಲಿ ಗೋ ಸಾಗಾಣಿಕೆದಾರರು ವಾಹನ ಹತ್ತಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಗಾಯಾಳುಗಳನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಆಸ್ಪತ್ರೆಯ ವೈದ್ಯರ ಜೊತೆ ಸಮಾಲೋಚನೆ ನಡೆಸಿ ಸೂಕ್ತ ಚಿಕಿತ್ಸೆ ನೀಡುವಂತೆ ಸಚಿವರು ಸೂಚಿಸಿದರು.
ತೀರ್ಥಹಳ್ಳಿ ತಾಲೂಕಿನ ಮೇಳಿಗೆಯಿಂದ ಗೋ ಸಾಗಾಟದ ವಾಹನ ತಡೆಯಲು ಯತ್ನಿಸಿದ ಕಿರಣ್ (23) ಮತ್ತು ಚರಣ್ (24) ಎಂಬ ಸಹೋದರರ ಮೇಲೆ ಪಿಕ್ ಅಪ್ ವ್ಯಾನ್ ಹತ್ತಿಸಿದ ಪರಿಣಾಮ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ಮಂಗಳವಾರ ದಾಖಲಾಗಿದ್ದರು.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಳಗಿ ಗ್ರಾಮದಿಂದ ಸುಮಾರು 20 ಕಿ.ಮೀ.ವರೆಗೆ ಯುವಕರು ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನ ಬೆನ್ನತ್ತಿದ್ದರು. ಈ ವೇಳೆ ಮಿನಿ ಲಾರಿಯನ್ನು ಚರಣ್ ಮತ್ತು ಕಿರಣ್ ಮೇಲೆ ದುಷ್ಕರ್ಮಿಗಳು ಹತ್ತಿಸಿದ್ದಾರೆ. ಸದ್ಯ ಗಂಭೀರವಾಗಿ ಗಾಯಗೊಂಡಿರುವ ಗಾಯಾಳುಗಳಿಗೆ ಉಡುಪಿಯ ಮಣಿಪಾಲದಲ್ಲಿರುವ ಕಸ್ತೂರ್ಬಾ ಮೆಡಿಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಿನ್ನೆ ತೀರ್ಥಹಳ್ಳಿ ಆಸ್ಪತ್ರೆಗೆ ಗಾಯಾಳುಗಳು ದಾಖಲಾಗಿದ್ದಾಗ ಗೃಹಸಚಿವ ಆರಗ ಜ್ಞಾನೇಂದ್ರ ಆರೋಗ್ಯ ವಿಚಾರಿಸಿದ್ದರು. ಈ ವೇಳೆ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಹೇಳಿಕೆ ನೀಡಿದ್ದಾರೆ. ಮಾಳೂರು ಪೊಲೀಸರು ಅಕ್ರಮ ಗೋಸಾಗಣೆ ವಾಹನ ಜಪ್ತಿ ಮಾಡಲಾಗಿದೆ. ಇಬ್ಬರು ಆರೋಪಿಗಳ ಬಂಧಿಸಲಾಗಿದ್ದು, ಮತ್ತೊಬ್ಬನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಮಿನಿ ಲಾರಿಯಲ್ಲಿ 3 ಹಸು, 2 ಎಮ್ಮೆ ಇತ್ತು ಎಂದು ತಿಳಿದುಬಂದಿದೆ. ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದಾರೆ.