ಕಾರವಾರ: ಡೆಂಗ್ಯೂ ಜ್ವರಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಮಾವಿನಕುರ್ವ ಪಂಚಾಯ್ತಿ ವ್ಯಾಪ್ತಿಯ ತಲಗೋಡು ನಿವಾಸಿ ಪ್ರಜ್ವಲ್ ಗೋವಿಂದ ಕಾರ್ವಿ (24) ಡೆಂಗ್ಯೂಗೆ ಬಲಿಯಾದ ಯುವಕ.
ಈತ ಸಾಗರಶ್ರೀ ಬೋಟ್‌ನಲ್ಲಿ ಮೀನುಗಾರನಾಗಿ ಕಾರ್ಯನಿರ್ವಹಿಸುತ್ತಿದ್ದು, ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತಿದ್ದ. ಆದರೆ ಚಿಕಿತ್ಸೆ ಫಲಿಸದೇ ಯುವಕ ಮೃತಪಟ್ಟಿದ್ದಾನೆ.