November 13, 2024

BJP ಟಿಕೆಟ್ ಕೊಡಿಸುವುದಾಗಿ ಕೋಟಿ ರೂ. ವಂಚನೆ: ಚೈತ್ರಾ ಮಾದರಿಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ

0

ವಿಜಯನಗರ: ವಿಧಾನಸಭಾ ಚುನಾವಣೆ ಮುಗಿದು ತಿಂಗಳುಗಳೇ ಕಳೆದರೂ ಬಿಜೆಪಿ ಟೆಕೆಟ್ ಹೆಸರಲ್ಲಿ ನಡೆದ ವಂಚನೆ ಪ್ರಕರಣಗಳು ಮತ್ತೆ ಮತ್ತೆ ಬೆಳಕಿಗೆ ಬರುತ್ತಿವೆ.

ಇದೀಗ ಹಗರಿಬೊಮ್ಮನಹಳ್ಳಿ ಟಿಕೆಟ್ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಗೆ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ನಿವೃತ್ತ ಇಂಜಿನಿಯರ್ ಶಿವಮೂರ್ತಿ ಎಂಬವರಿಗೆ 2 ಕೋಟಿ ರೂ.ಗೂ ಹೆಚ್ಚಿನ ಹಣವನ್ನು ಚೈತ್ರಾ ಪ್ರಕರಣದ ಮಾದರಿಯಲ್ಲೇ ವಂಚನೆ ಮಾಡಲಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರದಲ್ಲಿದ್ದ ಅವರಿಗೆ ಬಿಜೆಪಿ ನಾಯಕರು ಪರಿಚಯ ಮಾಡಿಕೊಂಡು ಟಿಕೆಟ್ ಕೊಡಿಸುವುದಾಗಿ ಹೇಳಿದ್ದಾರೆ. ಬಳಿಕ ಬಿಜೆಪಿ ಮುಖಂಡರ ಹೆಸರನ್ನು ಬಳಸಿಕೊಂಡು ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಜೆಪಿ ಮಾಜಿ ಮುಖಂಡ ಮತ್ತು ಹಾಲಿ ಕೆಆರ್‌ಪಿಪಿ ಪಕ್ಷದ ವಿಜಯನಗರ ಜಿಲ್ಲಾ ಅಧ್ಯಕ್ಷ ರೇವಣ್ಣ ಸಿದ್ದಪ್ಪ ಹಗರಿಬೊಮ್ಮನ ಟಿಕೆಟ್ ಕೊಡಿಸುವ ನೆಪದಲ್ಲಿ ಬಿಜೆಪಿಯ ಕೆಲ ನಾಯಕರನ್ನು ಪರಿಚಯ ಮಾಡಿಸುತ್ತಾರೆ. ಟಿಕೆಟ್‍ಗಾಗಿ ಹಣ ನೀಡಬೇಕೆಂದು ಹೇಳಿ ರೇವಣ್ಣ ಸಿದ್ದಪ್ಪ ಮತ್ತು ಪುತ್ತೂರಿನ ಶೇಖರ್ ಎಂಬಾತ ಹಂತ ಹಂತವಾಗಿ ಎರಡು ಕೋಟಿ ರೂ.ಗೂ ಹೆಚ್ಚು ಹಣ ವಸೂಲಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!