March 20, 2026

ಮಂಗಳೂರು: ಸ್ಟೇಟ್‌ಬ್ಯಾಂಕ್ ಬಳಿ ಖಾಸಗಿ ಬಸ್ ಢಿಕ್ಕಿ, ಪಾದಚಾರಿ ಸ್ಥಳದಲ್ಲೇ ಮೃತ್ಯು

0
image_editor_output_image-1267945019-1698123184344.jpg

ಮಂಗಳೂರು : ಮಂಗಳೂರು ನಗರದ ಸ್ಟೇಟ್‌ಬ್ಯಾಂಕ್ ಬಳಿ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ.

‌ಮಂಗಳೂರಿನಿಂದ ಹೂಹಾಕುವ ಕಲ್ಲು ಎಂಬಲ್ಲಿಗೆ ಚಲಿಸುತ್ತಿದ್ದ ಬಸ್ ಸ್ಟೇಟ್‌ಬ್ಯಾಂಕ್ ಸಮೀಪದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಪಾದಚಾರಿಗೆ ಢಿಕ್ಕಿ ಹೊಡೆಯಿತು ಎನ್ನಲಾಗಿದೆ‌.

ಇದರಿಂದ ಗಂಭೀರ ಗಾಯಗೊಂಡ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಖಾಸಗಿ ಬಸ್ ಚಾಲಕನ ಅಜಾಗರೂಕತೆ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಪೋಲಿಸರು ತಿಳಿಸಿದ್ದಾರೆ‌.

Leave a Reply

Your email address will not be published. Required fields are marked *

error: Content is protected !!