March 20, 2026

ಆಸ್ಪತ್ರೆಗೆ ಬರುತ್ತಿದ್ದ ಆ್ಯಂಬುಲೆನ್ಸ್ ಗೆ ಲಾರಿಗೆ ಢಿಕ್ಕಿ: ರೋಗಿ ಸಾವು ಚಾಲಕ ಸೇರಿ ಮೂವರಿಗೆ ಗಾಯ

0
image_editor_output_image-728850840-1698135980139.jpg

ನೆಲಮಂಗಲ: ಚಿತ್ರದುರ್ಗ ಆಸ್ಪತ್ರೆಯಿಂದ ಬೆಂಗಳೂರಿನ ಆಸ್ಪತ್ರೆಗೆ ರೋಗಿಯನ್ನು ಕರೆದುಕೊಂಡು ಬರುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ರೋಗಿ ಸಾವನ್ನಪ್ಪಿದ ಘಟನೆ ನೆಲಮಂಗಲದ ಬೊಮ್ಮನಹಳ್ಳಿ ಬಳಿ ನಡೆದಿದೆ.

ಘಟನೆಯಲ್ಲಿ ಅಂಬುಲೆನ್ಸ್ ಚಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ.
ಮೃತನನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಆತನನ್ನು ಚಿಕಿತ್ಸೆಗಾಗಿ ಕರೆತರುವಾಗ ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಂಟೇನರ್ ಲಾರಿಗೆ ಅಂಬುಲೆನ್ಸ್ ಡಿಕ್ಕಿಯಾಗಿದೆ.

ಪರಿಣಾಮ ವಿಜಯ್ ಕುಮಾರ್ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ಆಸ್ಪತ್ರೆಗೆ ಕರದೊಯ್ಯುವ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ

Leave a Reply

Your email address will not be published. Required fields are marked *

error: Content is protected !!