June 13, 2026

ಮಡಿಕೇರಿ: ಶೋಭಯಾತ್ರೆ ವೇಳೆ ಮಗುಚಿ ಬಿದ್ದ ಮಂಟಪದ ಟ್ರ್ಯಾಕ್ಟರ್

0
image_editor_output_image931145924-1698212773954.jpg

ಮಡಿಕೇರಿ: ಮಡಿಕೇರಿ ದಸರಾ ದಶಮಂಟಪಗಳ ಶೋಭಯಾತ್ರೆ ವೇಳೆ ಮಂಟಪವೊಂದರ ಟ್ರಾಕ್ಟರ್ ಮಗುಚಿ ಬಿದ್ದಿದ್ದು, ಮೂವರು ಗಾಯಗೊಂಡಿದ್ದಾರೆ.

ಶೋಭಯಾತ್ರೆ ಆರಂಭವಾದ ಬಳಿಕ ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ ದೇಗುಲ ಸಮಿತಿಯ ಮಂಟಪವು ದೇಗುಲದಿಂದ ಮೆರವಣಿಗೆಯಲ್ಲಿ ಹೊರಟಿತ್ತು.

ಡಿಸಿಸಿ ಬ್ಯಾಂಕ್ ಸಮೀಪ ಇಳಿಜಾರಿನ ರಸ್ತೆಯಲ್ಲಿ ಮಂಟಪ ಇರಿಸಲಾಗಿದ್ದ ಟ್ರಾಕ್ಟರ್ ಬುಧವಾರ ನಸುಕಿನ ಜಾವ 3:30ರ ವೇಳೆ ಮಗುಚಿದೆ. ಇದರಿಂದ ಮೂವರಿಗೆ ಗಾಯಗಳಾಗಿವೆ. ಈ ಕುರಿತು ಇನ್ನೂ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಅಪಾರ ನೂಕುನುಗ್ಗಲು ಉಂಟಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಜನರು ಪರದಾಡಿದರು.

Leave a Reply

Your email address will not be published. Required fields are marked *

error: Content is protected !!