ಮಂಗಳೂರು: ಕುಣಿತದ ವೇಳೆ ರಿವರ್ಸ್ ಪಲ್ಟಿ, ಆಯತಪ್ಪಿ ನೆಲಕ್ಕೆ ಬಿದ್ದ ಯುವಕ ಆಸ್ಪತ್ರೆಗೆ ದಾಖಲು
ಮಂಗಳೂರು: ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕನೊಬ್ಬನ ಕತ್ತಿಗೆ ಏಟು ಬಿದ್ದ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ದೇವರ ಎದುರು ಹುಲಿವೇಷ ಧರಿಸಿ ಪ್ರದರ್ಶನದ ವೇಳೆ ಈ ಅವಘಡ ಸಂಭವಿಸಿದೆ.
ಮುಳಿಹಿತ್ಲು ಎಂಬಲ್ಲಿನ ಹುಲಿವೇಷ ತಂಡದ ಕುಣಿತದ ವೇಳೆ ಹುಲಿವೇಷಧಾರಿಯೊಬ್ಬ ರಿವರ್ಸ್ ಪಲ್ಟಿ ಹೊಡೆಯುತ್ತಿದ್ದರು. ಈ ವೇಳೆ ಆಯತಪ್ಪಿ ತಲೆ ನೆಲಕ್ಕೆ ಬಡಿದು ಕತ್ತು ಉಳುಕಿದೆ.




