ನದಿಗೆ ಬಿದ್ದ ಉರುಳಿಬಿದ್ದ ಕಾರು: 6 ಮಂದಿ ನೀರಿನಲ್ಲಿ ಮುಳುಗಿ ಸಾವು
ಉತ್ತರಾಖಂಡ್: ಕಾರು ನದಿಗೆ ಬಿದ್ದ ಪರಿಣಾಮ ಕರ್ನಾಟಕದ ಇಬ್ಬರು ಸೇರಿದಂತೆ 6 ಮಂದಿ ಮೃತಪಟ್ಟಿರುವ ಘಟನೆ ಉತ್ತರಾಖಂಡದ ಪಿಥೋರಗಢ ಜಿಲ್ಲೆಯಲ್ಲಿ ಮಂಗಳವಾರ(ಅ.24 ರಂದು) ನಡೆದಿದೆ.
ಕೈಲಾಸ ದೇವರ ದರ್ಶನ ಮುಗಿಸಿ ವಾಪಾಸ್ ಆಗುವ ವೇಳೆ ಈ ದುರಂತ ಘಟನೆ ನಡೆದಿದೆ ಎಂದು ಪಿಥೋರಗಢ್ ಪೊಲೀಸ್ ಅಧೀಕ್ಷಕ (ಎಸ್‌ಪಿ) ಲೋಕೇಶ್ವರ್ ಸಿಂಗ್ ಹೇಳಿದ್ದಾರೆ.
ಮಂಗಳವಾರ ಸಂಜೆ ಧಾರ್ಚುಲಾ-ಲಿಪುಲೇಖ್ ರಸ್ತೆಯಲ್ಲಿ ಬರುತ್ತಿದ್ದ ವೇಳೆ ಕಾರು ಕಾಳಿ ನದಿಗೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ 6 ಮಂದಿ ಮೃತಪಟ್ಟಿದ್ದಾರೆ.
ಇವರು ಕೈಲಾಸ ದರ್ಶನವನ್ನು ಮಾಡಿ ವಾಪಾಸಾಗುತ್ತಿದ್ದರು. ಮೃತರಲ್ಲಿ ಇಬ್ಬರು ಬೆಂಗಳೂರಿನವರು, ಇಬ್ಬರು ತೆಲಂಗಾಣದವರು ಮತ್ತು ಇಬ್ಬರು ಉತ್ತರಾಖಂಡದವರು ಎಂದು ಲೋಕೇಶ್ವರ್ ಸಿಂಗ್ ಹೇಳಿದ್ದಾರೆ.




