February 4, 2026

ಉಳ್ಳಾಲ: ಬೈಕ್ ಢಿಕ್ಕಿ, ರಸ್ತೆ ದಾಟುತ್ತಿದ್ದ ಮಹಿಳೆ ಸಾವು

0
image_editor_output_image-2099497857-1698213992835.jpg

ಉಳ್ಳಾಲ: ಮಂಗಳೂರು ದಸರಾ ತೆರಳುತ್ತಿದ್ದ ಬೈಕ್ ಚಾಲಕನ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಪಾದಚಾರಿ ಮಹಿಳೆ ಸಾವನ್ನಪ್ಪಿರುವ ಘಟನೆ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಮುಂಭಾಗ ನಡೆದಿರುವುದಾಗಿ ವರದಿಯಾಗಿದೆ.

ಬಾಗಲಕೋಟೆ ಬಾದಾಮಿ ಲಖಮಾಪುರ ನಿವಾಸಿ ಶಿವಪ್ಪ ದೊಡ್ಡಮನಿ ಎಂಬವರ ಪತ್ನಿ ಎಲ್ಲವ್ವ ಶಿವಪ್ಪ ದೊಡ್ಡಮನಿ (50) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ಮಂಗಳೂರು ದಸರಾ ತೆರಳುತ್ತಿದ್ದ ದೈಗೋಳಿ ನಿವಾಸಿ ಗಗನ್ ಎಂಬಾತನ ಬೈಕ್ ಢಿಕ್ಕಿ ಹೊಡೆದಿದೆ.

ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!