February 4, 2026

ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ಯುವಕ ನದಿಯಲ್ಲಿ ಮುಳುಗಿ ಸಾವು

0
image_editor_output_image1765088846-1698224610871.jpg

ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ಯುವಕನೊಬ್ಬ ಭದ್ರಾ ನದಿಯಲ್ಲಿ ಈಜಲು ಹೋಗಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಕಳಸ ತಾಲೂಕಿನ ಹೆಬ್ಬಾಳೆಯ ಭದ್ರಾ ನದಿಯಲ್ಲಿ ಮಂಗಳವಾರ ನಡೆದಿದೆ.

ಮೃತ ಯುವಕನನ್ನು ಬೆಂಗಳೂರಿನ ಶ್ರೀನಗರದ ನಿವಾಸಿ ಗೋಕುಲ್(25) ಎಂದು ಗುರುತಿಸಲಾಗಿದೆ.

ಕಳಸ ಪೊಲೀಸರು, ಮುಳುಗು ತಜ್ಞರ ಸಹಾಯದಿಂದ ಯುವಕನ ಮೃತ ದೇಹವನ್ನು ಪತ್ತೆ ಮಾಡಿದ್ದಾರೆ.

ಕಳಸ ಆಸ್ಪತ್ರೆಯಲ್ಲಿ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!