February 4, 2026

ಜಂಬೂ ಸವಾರಿಯ ಆನೆ ಸಾಗಿಸುತ್ತಿದ್ದ ಲಾರಿ ಡಿಕ್ಕಿ: ಚಾಲಕ ಮೃತ್ಯು
 

0
25-10-2023akaccident.jpg


ಆನೇಕಲ್ : ಜಂಬೂ ಸವಾರಿ ಆನೆಯನ್ನು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದು ಚಾಲಕ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಶಾನಮಾವು ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಪುದುಕೊಟ್ಟೈ ನಿವಾಸಿ ಆರೋಗ್ಯಸ್ವಾಮಿ(54) ಮೃತಪಟ್ಟವರು.ಚಾಲಕ ಆರೋಗ್ಯಸ್ವಾಮಿ ಲಾರಿ ಮುಂದೆಯೇ ಹ್ಯಾಂಡ್ ಬ್ರೇಕ್ ಹಾಕದೆ ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ ವಾಹನ ಏಕಾಏಕಿ ಮುಂದೆ ಸಾಗಿ ಅವರ ಮೇಲೆ ಹರಿದ ಪರಿಣಾಮ ಅವರು ಸಾವನ್ನಪ್ಪಿದ್ದಾರೆ.

ಸೋಮವಾರ ರಾತ್ರಿ ಬನ್ನೇರುಘಟ್ಟ ಚಂಪಕಧಾಮ ಸ್ವಾಮಿ ಜಂಬೂ ಸವಾರಿಯಲ್ಲಿ ಪಾಲ್ಗೊಂಡಿದ್ದ ಆನೆಯನ್ನು ತಿರುಚ್ಚಿಗೆ ಸಾಗಿಸುತ್ತಿದ್ದಾಗ ಘಟನೆ ನಡೆದಿದೆ. ಅಪಘಾತ ಸಂಭವಿಸಿದಾಗ ಲಾರಿಯಲ್ಲಿ ಓರ್ವ ಮಾವುತ ಸೇರಿದಂತೆ ಆರು ಮಂದಿ ಇದ್ದರು ಎನ್ನಲಾಗಿದೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಎರಡು ಕ್ರೇನ್‌ಗಳ ಸಹಾಯದಿಂದ ಲಾರಿಯನ್ನು ಹೊರತೆಗೆಯಲಾಯಿತು. ಲಾರಿಯಲ್ಲಿದ್ದ ಆನೆಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಚಾಲಕನ ಮೃತದೇಹವನ್ನು ಹೊಸೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದ ಕುರಿತು ಹೊಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.”

Leave a Reply

Your email address will not be published. Required fields are marked *

You may have missed

error: Content is protected !!