February 4, 2026

ರಸ್ತೆಯ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ಢಿಕ್ಕಿ: 13 ಮಂದಿ ಸಾವು

0
image_editor_output_image2034851971-1698299259888.jpg

ಚಿಕ್ಕಬಳ್ಳಾಪುರ: ರಸ್ತೆಯ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿಯಾಗಿ 13 ಮಂದಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿ ನಡೆದಿದೆ.

ಆಂಧ್ರಪ್ರದೇಶ ನೋಂದಣಿಯ ಟಾಟಾ ಸುಮೋ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಇಂದು ಬೆಳಗ್ಗೆ 6:30ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ.

ದುರ್ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇಂದು ಬೆಳಗ್ಗೆ ಅತಿಯಾದ ಮಂಜು ಇತ್ತು. ಈ ಕಾರಣಕ್ಕೆ ಚಾಲಕನಿಗೆ ರಸ್ತೆಯ ಗುರುತು ಸಿಗದೇ ನಿಂತಿದ್ದ ಟ್ಯಾಂಕರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ.

ಬೆಳಗ್ಗೆ 6:30ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಕಾರು ಬಹಳ ವೇಗವಾಗಿ ಸಂಚರಿಸುತಿತ್ತು. ಹೈದರಾಬಾದ್ – ಬೆಂಗಳೂರು ಹೈವೇಯಲ್ಲಿ ರಸ್ತೆಯ ಗುರುತು ಸಿಗದೇ ಈ ಕಾರು ಗುದ್ದಿರಬಹುದು.

ಕಾರಿನಲ್ಲಿದ್ದ 14 ಮಂದಿ ಪೈಕಿ 10 ಮಂದಿ ಸ್ಥಳದಲ್ಲೇ ಸಾವನಪ್ಪಿದ್ದರೆ ಇಬ್ಬರು, ಮೂವರು ಮಾತ್ರ ಉಸಿರಾಡುತ್ತಿದ್ದರು ಎಂದು ತಿಳಿಸಿದ್ದಾರೆ

Leave a Reply

Your email address will not be published. Required fields are marked *

You may have missed

error: Content is protected !!