February 4, 2026

ಚಿಕ್ಕಮಗಳೂರು: 200 ಅಡಿ ಆಳದ ಪ್ರಪಾತಕ್ಕೆ ಬಿದ್ದ ಕಾರು: ಓರ್ವ ಸ್ಥಳದಲ್ಲೇ ಸಾವು

0
image_editor_output_image232069436-1698384378763.jpg

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 200 ಅಡಿ ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ಬಳಿ ನಡೆದಿದೆ.

ರಂಜನ್ (38) ಮೃತ ಚಾಲಕ. ಪ್ರಪಾತಕ್ಕೆ ಬಿದ್ದ ಪರಿಣಾಮ ಮಾರುತಿ-800 ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ತಡೆಗೋಡೆ ಇಲ್ಲದೆ ಏಕಾಏಕಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಜನ್ನಾಪುರದಿಂದ ಕಳಸ ಕಡೆಗೆ ಹೋಗುವ ಸಂದರ್ಭ ಅವಘಡ ಸಂಭವಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!