ಮಂಗಳೂರು: 1ನೇ ತರಗತಿ ವಿದ್ಯಾರ್ಥಿನಿ ಮೇಲೆ ತಂದೆಯಿಂದ ಲೈಂಗಿಕ ದೌರ್ಜನ್ಯ:
ಆರೋಪಿಯ ಬಂಧನ
ಮಂಗಳೂರು: ಮಗಳ ಮೇಲೆಯೇ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಗರ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕದ್ರಿ ನಿವಾಸಿಯಾಗಿದ್ದ ಈತ ಒಂದನೇ ತರಗತಿಯಲ್ಲಿ ಓದುತ್ತಿದ್ದ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ್ದು, ಈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಝೊಮಾಟೊದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಯೂ ರೌಡಿಶೀಟರ್ ಆಗಿದ್ದು, ಈತನ ತನ್ನ ತಾಯಿಗೂ ಹಲ್ಲೆ ಮಾಡಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.





