February 4, 2026

ಅಂತರ್ರಾಷ್ಟ್ರೀಯ ಕಬಡ್ಡಿ ಪಟುವಿನ‌ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

0
image_editor_output_image43486050-1698386569546.jpg

ನೆಲಮಂಗಲ: ಕಬ್ಬಡಿ ಆಟಗಾರ್ತಿ ಧನಲಕ್ಷ್ಮಿ(25) ನೆಲಮಂಗಲದ ಆದರ್ಶನಗರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಕೆಯ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವಾರು ಕಬಡ್ಡಿ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದ ಧನಲಕ್ಷ್ಮಿ ಬುಧವಾರ ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಆಕೆ ತಂದೆ ಮನೆಯಲ್ಲಿರುವಾಗಲೇ ರೂಮ್ ನಲ್ಲಿ ನೇಣು ಬಿಗಿದುಕೊಂಡಿದ್ದು, ಅನುಮಾನಗೊಂಡ ತಂದೆ ರೋಮ್ ಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಹಾಸನ ಮೂಲದವರಾದ ಧನಲಕ್ಷ್ಮಿಯ ಕುಟುಂಬ ಆಕೆಯನ್ನು ಕಂಪ್ಯೂಟರ್ ಅಪ್ಲಿಕೇಷನ್ಸ್‌ನಲ್ಲಿ ಸ್ನಾತಕೋತ್ತರ (ಎಂಸಿಎ) ಮಾಡಿಸಲು ಬೆಂಗಳೂರಿಗೆ ಬಂದಿದ್ದರು.

ನಂತರ ಆಕೆ ಕಾಡುಗೋಡಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಐದು ವರ್ಷಗಳಿಂದ ಅರಿಶಿನಕುಂಟೆಯ ಆದರ್ಶನಗರದಲ್ಲಿ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!