September 19, 2024

ಸುಳ್ಯ: ಒಣಗಿದ ಅಡಿಕೆ ರಾಶಿ ಮಧ್ಯೆ ಯುವಕನೋರ್ವನ ಅರೆಬೆಂದ ಮೃತದೇಹ ಪತ್ತೆ: ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

0

ಸುಳ್ಯ: ಒಣಗಿದ ಅಡಿಕೆ ರಾಶಿ ಮಧ್ಯೆ ಯುವಕನೋರ್ವನ ಅರೆಬೆಂದ ಮೃತದೇಹ ಪತ್ತೆಯಾದ ಘಟನೆ‌‌ ಸುಳ್ಯ ತಾಲೂಕಿನ ಗುತ್ತಿಗಾರು‌ ಗ್ರಾಮದಲ್ಲಿ ನಡೆದಿದೆ.

ಮೃತದೇಹ ಅರೆಬೆಂದ ರೀತಿಯಲ್ಲಿ ಮನೆಯ ಕೊಟ್ಟಿಗೆಯಲ್ಲಿ ಪತ್ತೆಯಾಗಿದೆ.‌ ಮೃತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಅಂದಾಜಿಸಿದ್ದು, ಆದರೆ ಸಾವಿನ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.

ಮೃತ ವ್ಯಕ್ತಿಯನ್ನು ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯೂ ಎಂಬವರ ಪುತ್ರ ಸೈಬಿನ್ ಎಂದು ಗುರುತಿಸಲಾಗಿದೆ.

ಇಂದು ಮಧ್ಯಾಹ್ನದ ವೇಳೆ ಘಟನೆ ಬೆಳಕಿಗೆ ಬಂದಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!