ಬೆಸ್ಮೆಂಟ್‌ನಲ್ಲಿ ಶೇಖರಣೆಯಾಗಿದ್ದ ನೀರಿನಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವು
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಬೆಸ್ಮೆಂಟ್‌ನಲ್ಲಿ ಶೇಖರಣೆಯಾಗಿದ್ದ ನೀರಿನಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ.
ಅರ್ಷಲನ್ ಖಾನ್ (9) ಹಾಗೂ ಅಮೀನ್ ಖಾನ್ (7) ಮೃತ ದುರ್ದೈವಿಗಳು. ನಿರ್ಮಾಣ ಹಂತದ ಕಟ್ಟಡದ ಬೆಸ್ಮೆಂಟ್‌ನಲ್ಲಿ ಶೇಖರಣೆಯಾಗಿದ್ದ ನೀರಿಗೆ ಬಿದ್ದು ಮಕ್ಕಳು ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಸುದ್ದಗುಂಟೆ ಪಾಳ್ಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.




