ಚಿಕ್ಕಮಗಳೂರು: ರೌಡಿ ಶೀಟರ್ ಪೂರ್ಣೇಶ್ ಮೇಲೆ ಫೈರಿಂಗ್ ಮಾಡಿದ ಪೊಲೀಸರು
ಚಿಕ್ಕಮಗಳೂರು: ವಾರಂಟ್ ಜಾರಿಯಾಗಿದ್ದರೂ ಕೋರ್ಟಿಗೆ ಹಾಜರಾಗದ ರೌಡಿ ಶೀಟರ್ ಪೂರ್ಣೇಶ್ ಮೇಲೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ವರದಿಯಾಗಿದೆ.
ಸುಮಾರು ಒಂದೂವರೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಪೂರ್ಣೇಶ್ ನನ್ನು ಬಂಧಿಸಲು ಖಚಿತ ಮಾಹಿತಿ ಮೇರೆಗೆ ಆತ ಅವಿತುಕೊಂಡಿದ್ದ ಸ್ಥಳಕ್ಕೆ ಪೊಲೀಸರು ಧಾವಿಸಿದ್ದರು. ಈ ವೇಳೆ ಪೊಲೀಸ್ ಸಿಬ್ಬಂದಿ ಮಂಜುನಾಥ್ ರಿಗೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲೆತ್ನಿಸಿದಾಗ ಪೋಲೀಸರ ಪ್ರಾಣ ರಕ್ಷಣೆ ಉದ್ದೇಶದಿಂದ ಆರೋಪಿಯ ಕಾಲಿಗೆ ಪಿ.ಎಸ್.ಐ.ದಿಲೀಪ್ ಕುಮಾರ್ ಫೈರಿಂಗ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.





