ವಿಟ್ಲ: ನೇರಳಕಟ್ಟೆಯಲ್ಲಿ ಆಂಬ್ಯುಲೆನ್ಸ್ – ಕಾರು ನಡುವೆ ಅಪಘಾತ
ವಿಟ್ಲ: ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ಆಂಬ್ಯುಲೆನ್ಸ್ ಮತ್ತು ಕಾರು ಅಪಘಾತ ಸಂಭವಿಸಿದ ಘಟನೆ ನಡೆದಿದೆ.
ಒಳ ರಸ್ತೆಯಿಂದ ಬಂದ
ಬೈಕ್ ಸವಾರನನ್ನು ತಪ್ಪಿಸಲು ಯತ್ನಿಸಿದ ಕಾರು ಚಾಲಕ ಮಂಗಳೂರಿಗೆ ರೋಗಿಯೊಬ್ಬರನ್ನು ಕರೆದುಕೊಂಡು ಹೋಗುತ್ತಿದ್ದ ಆಂಬ್ಯುಲೆನ್ಸ್ ಗೆ ಡಿಕ್ಕಿಯಾಗಿದೆ. ಇದರಿಂದ ಎರಡು ವಾಹನಗಳು ಜಖಂಗೊಂಡಿದೆ.
ಬೇರೆ ಆಂಬ್ಯುಲೆನ್ಸ್ ಮೂಲಕ ರೋಗಿಯನ್ನು ಮಂಗಳೂರಿಗೆ ಸ್ಥಳಾಂತರಿಸಲಾಯಿತು.