ಕರಾವಳಿ ಜಿಲ್ಲೆಯ 6 ಸಾಧಕರು ಸೇರಿ 68 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ
ಬೆಂಗಳೂರು: ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ಪ್ರಕಟಗೊಂಡಿದ್ದು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ನಾಡಿನ 68 ಮಂದಿ ಸಾಧಕರು, 10 ಸಂಘ-ಸಂಸ್ಥೆಗಳು ಪ್ರಶಸ್ತಿಗೆ ಆಯ್ಕೆಯಾಗಿವೆ.
ಕರಾವಳಿಯ ಜಿಲ್ಲೆಯಲ್ಲಿ, ಸಮಾಜ ಸೇವೆಯಲ್ಲಿ ಚಾರ್ಮಾಡಿ ಹಸನಬ್ಬ, ಯಕ್ಷಗಾನದಲ್ಲಿ ಲೀಲಾವತಿ ಬೈಪಡಿತ್ತಾಯ, ಆರ್ಗೋಡು ಮೋಹನ್‌ದಾಸ್ ಶೆಣೈ, ವೈದ್ಯಕೀಯ ಕ್ಶೇತ್ರದಲ್ಲಿ ಡಾ.ಪ್ರಶಾಂತ್ ಶೆಟ್ಟಿ, ಸಂಕೀರ್ಣ ಕ್ಶೇತ್ರದಲ್ಲಿ ಹಾಜಿ ಅಬ್ದುಲ್ಲಾ ಪರ್ಕಳ, ಪತ್ರಿಕೋದ್ಯಮದಲ್ಲಿ ದಿನೇಶ್ ಅಮೀನ್‌ಮಟ್ಟು ಪ್ರಶಸ್ತಿ ಲಭಿಸಿದೆ.
ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ಸುವರ್ಣ ವರ್ಷದ ನೆನಪಿಗಾಗಿ ಕನ್ನಡ, ಕರ್ನಾಟಕದ ಏಳಿಗೆಗಾಗಿ ಶ್ರಮಿಸಿದ 10 ಸಂಘ-ಸಂಸ್ಥೆ ದಕ್ಷಿಣ ಕನ್ನಡದ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಮತ್ತು ಮಾರುತಿ ಜನಸೇವಾ ಸಂಘಕ್ಕೆ ಪ್ರಶಸ್ತಿ ಲಭಿಸಿದೆ.
ಸಂಗೀತ, ನೃತ್ಯ, ಚಲನಚಿತ್ರ, ರಂಗಭೂಮಿ, ಶಿಲ್ಪಕಲೆ, ಚಿತ್ರಕಲೆ, ಕರಕುಶಲ, ಯಕ್ಷಗಾನ, ಬಯಲಾಟ, ಜನಪದ, ಸಮಾಜಸೇವೆ, ಆಡಳಿತ, ವೈದ್ಯಕೀಯ, ಸಾಹಿತ್ಯ, ಶಿಕ್ಷಣ, ಕ್ರೀಡೆ, ನ್ಯಾಯಾಂಗ, ಪರಿಸರ, ಮಾಧ್ಯಮ, ವಿಜ್ಞಾನ ತಂತ್ರಜ್ಞಾನ, ಸ್ವಾತಂತ್ರ್ಯ ಹೋರಾಟಗಾರ, ಹೊರನಾಡು, ಗಡಿನಾಡು ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರು, ವಿವಿಧ ಸಂಘಟನೆಗಳನ್ನು ಗುರುತಿಸಿ ಈ ಬಾರಿ ಪ್ರಶಸ್ತಿಗೆ ಪರಿಗಣಿಸಲಾಗಿದೆ.”