April 5, 2025

ಕಡಬ: 17 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

0

ಕಡಬ : 17 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ವಾರೆಂಟ್ ಹಿನ್ನೆಲೆಯಲ್ಲಿ ಕಡಬ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸಿದ್ದಾರೆ.

ಉಳ್ಳಾಲ ತಲಪಾಡಿಯ ಉಚ್ಚಿಲ ನಿವಾಸಿ ಬಾಕೂರು ಅಶ್ರಫ್ ಬಂಧಿತ ಆರೋಪಿಯಾಗಿದ್ದಾನೆ . ಈತನ ವಿರುದ್ದ ಕಡಬ ಪೊಲೀಸ್ ಠಾಣಾ ‌ಅ,ಕ್ರ 43/2006 ಕಲಂ: 379,r/w 34 IPC ಹಾಗೂ ಮಾನ್ಯ ನ್ಯಾಯಾಲಯದ ಸಿಸಿ ನಂಬ್ರ235/2011ರಂತೆ ಪ್ರಕರಣ ದಾಖಲಾಗಿ ವಾರೆಂಟ್ ಹೊರಡಿಸಲಾಗಿತ್ತು.

ಈತನ ವಿರುದ್ದ ಕಾಸರಗೋಡು ಜಿಲ್ಲೆಯ ವಿವಿಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಅಭಿನಂದನ್ ಸೂಚನೆಯಂತೆ ಸಿಬ್ಬಂದಿಗಳಾದ ಅಕ್ಷಯ್ ಹಾಗೂ ಠಾಣಾ ವಾರೆಂಟ್ ಟೀಮ್ ಕಾಸರಗೋಡಿನಲ್ಲಿ ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಪುತ್ತೂರು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿ ಅಶ್ರಫ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

 

 

Leave a Reply

Your email address will not be published. Required fields are marked *

error: Content is protected !!