ಮಾಲ್ ನಲ್ಲಿ ಮಹಿಳೆಯರ ಜೊತೆ ಅನುಚಿತವಾಗಿ ವರ್ತನೆ: ವಿಡಿಯೋ ದೃಶ್ಯ ಆಧರಿಸಿ ಗುರುತು ಪತ್ತೆಹಚ್ಚಿದ ಪೊಲೀಸರು
ಬೆಂಗಳೂರು: ಪ್ರತಿಷ್ಠಿತ ಮಾಲ್‌ವೊಂದರಲ್ಲಿ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ದೃಶ್ಯ ಆಧರಿಸಿ ಪೊಲೀಸರು ಆರೋಪಿಯ ಗುರುತನ್ನು ಪತ್ತೆಹಚ್ಚಿದ್ದಾರೆ.
ಬೆಂಗಳೂರಿನ ಬಸವೇಶ್ವರನಗರದ ನಿವಾಸಿ ಅಶ್ವಥ್ ನಾರಾಯಣ್ (60) ಆರೋಪಿ. ಮೂರು ದಿನಗಳ ಹಿಂದೆ ಬೆಂಗಳೂರಿನ ಮಾಲ್‌ವೊಂದರಲ್ಲಿ ಈತ ಯುವತಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದ.
ಈ ವೇಳೆ ಯಶವಂತ್ ಎಂಬವರು ಇದನ್ನು ವಿಡಿಯೋ ಚಿತ್ರೀಕರಿಸಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಮಾಲ್ ಮ್ಯಾನೇಜರ್ ಆರೋಪಿ ವಿರುದ್ಧ ಕೇಸ್ ದಾಖಲಿಸಿದ್ದರು.





