ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಹಣ ಕಳ್ಳತನ: ಸಂಘದ ಮೂವರು ಸದಸ್ಯರು ಸೇರಿ 10 ಮಂದಿಯ ಬಂಧನ
ಧಾರವಾಡ: ನಗರದ ಹೊರವಲಯದ ರಾಯಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪ್ರಾದೇಶಿಕ ಕಚೇರಿಯಲ್ಲಿ ಹಣ ಕಳ್ಳತನಕ್ಕೆ ಸಂಬಂಧಪಟ್ಟಂತೆ ಸಂಘದ ಮೂವರು ಸದಸ್ಯರು ಸೇರಿ 10 ಕಳ್ಳರನ್ನು ಪೊಲೀಸರು ಇದೀಗ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಯಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪ್ರಾದೇಶಿಕ ಕಚೇರಿಯಲ್ಲಿ ಕಳೆದ ಅಕ್ಟೋಬರ್ 24 ರಂದು ಕಳ್ಳತನವಾಗಿತ್ತು. ಕಚೇರಿಯ ಲಾಕರ್‌ನಲ್ಲಿದ್ದ 1 ಕೋಟಿ 24 ಲಕ್ಷ ರೂ. ಹಣ ಕಳುವಾಗಿತ್ತು.
ಧಾರವಾಡ ಜಿಲ್ಲೆಗೆ ಸಂಬಂಧಿಸಿದ ಎಲ್ಲ ವ್ಯವಹಾರ, ಕಚೇರಿ ಕೆಲಸಗಳು ಇಲ್ಲಿಯೇ ನಡೆಯುತ್ತವೆ. ಆದರೆ ಇಲ್ಲಿ ಯಾವುದೇ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿರಲಿಲ್ಲ.





