ಅಡಿಕೆ ವ್ಯಾಪಾರಿಯ 1 ಕೋಟಿ ರೂ. ಹಣ ಕಳವು: ಕಾರು ಚಾಲಕ ಸಂತೋಷ್ ಸೇರಿ ಮೂವರ ಬಂಧನ
ಬೆಂಗಳೂರು: ಅಂತಾರಾಜ್ಯ ಅಡಿಕೆ ವ್ಯಾಪಾರಿಯ 1 ಕೋಟಿ ರೂ. ಹಣ ಕಳವು ಪ್ರಕರಣ ಆರೋಪಿಗಳ ಜಾಡು ಪತ್ತೆ ಹಚ್ಚಿದ ಉಪ್ಪಾರಪೇಟೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಕಾರು ಚಾಲಕ ಸಂತೋಷ್ ಸೇರಿ ಮೂವರು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಅಂತಾರಾಜ್ಯ ಅಡಿಕೆ ವ್ಯಾಪಾರಿ ಹೆಚ್.ಎಸ್. ಉಮೇಶ್ ಅ.7 ರಂದು ಚಿತ್ರದುರ್ಗದಿಂದ ವಿವಿಧ ಜಿಲ್ಲೆಗಳ ಅಡಿಕೆ ಖರೀದಿಗೆ ಕಾರಿನಲ್ಲಿ 1 ಕೋಟಿ ರೂ. ಹಣ ತಂದಿದ್ದರು.
ನೀಲಿ ಬಣ್ಣದ ಬ್ಯಾಗಿನಲ್ಲಿ ಬರೋಬ್ಬರಿ 1 ಕೋಟಿ ರೂ. ಹಣವನ್ನು ಕಾರಿನ ಡಿಕ್ಕಿಯಲ್ಲಿ ತಂದಿದ್ದರು. ಊಟಕ್ಕೆಂದು ಗಾಂಧೀನಗರದ ಹೋಟೆಲ್ ಮುಂಭಾಗ ಕಾರು ನಿಲ್ಲಿಸಿದ್ದರು.





