December 19, 2025

ಭೀಕರ ಅಪಘಾತ: ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಮೃತ್ಯು

0
image_editor_output_image1128417428-1698938604514

ಕಲಬುರಗಿ: ಅಫಜಲಪುರ ಮತ್ತು ಬಳ್ಳೂರಗಿ ನಡುವಿನ ರಸ್ತೆಯ ಹಳ್ಳೋರಿ ಕ್ರಾಸ್ ಬಳಿ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಮನಕಲಕುವ ಘಟನೆ ನಡೆದಿದೆ.

ಬೈಕ್ ಮೇಲೆ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಐವರು ತೆರಳುತ್ತಿರುವಾಗ ದುರ್ಘಟನೆ ಸಂಭವಿಸಿದೆ. ದುಧನಿಯಿಂದ ಅಫಜಲಪುರ ಕಡೆಗೆ ಬರುವಾಗ ಎದುರಿಗೆ ಬಂದ ಲಾರಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಮೃತಪಟ್ಟವರೆಲ್ಲರೂ ಅಫಜಲಪುರದಲ್ಲಿ ಫಾಸ್ಟ್ ಫುಡ್ ಮಾರಾಟದ ಹೋಟೆಲ್ ನಡೆಸುತ್ತಿದ್ದರೆಂದು ತಿಳಿದುಬಂದಿದೆ. ನೇಪಾಳ ಮೂಲದ ಈ ಕುಟುಂಬ ಕಳೆದ ಹಲವು ವರ್ಷಗಳಿಂದ ಅಫಜಲಪುರ ಪಟ್ಟಣದಲ್ಲಿ ವಾಸವಿತ್ತು. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!