ಮಲ್ಟಿನ್ಯಾಷನಲ್ ಕಂಪೆನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯ ಅತ್ಯಾಚಾರ

ಚಿತ್ರದುರ್ಗ: ಅಮೆರಿಕದ ಮಲ್ಟಿನ್ಯಾಷನಲ್ ಕಂಪನಿಯೊಂದರಲ್ಲಿ ಉನ್ನತ ಹುದ್ದೆ ಕೊಡಿಸುವುದಾಗಿ ಯುವತಿಯನ್ನು ನಂಬಿಸಿ, ಕೋಟಿಗಟ್ಟಲೆ ಹಣ ಪಡೆದು ವಂಚಿಸಿದ್ದಲ್ಲದೇ ಸತತ 4 ವರ್ಷಗಳಿಂದ ಪ್ರೀತಿಸುವ ನಾಟಕವಾಡಿ, ಅತ್ಯಾಚಾರವೆಸಗಿದ್ದಾನೆಂದು ಆರೋಪಿಸಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ.
ಉದ್ಯೋಗದ ಆಸೆಗೆ ಯುವಕನಿಂದ ಮೋಸ ಹೋಗಿ ನ್ಯಾಯಕ್ಕಾಗಿ ಚಿತ್ರದುರ್ಗದ ಯುವತಿ ಅಲೆದಾಡುತ್ತಿದ್ದಾರೆ.
2019 ರಲ್ಲಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಚಿತ್ರದುರ್ಗ ಮೂಲದ ಸೌರಭ್ ಎಂಬ ಯುವಕನ ಪರಿಚಯವಾಗಿದ್ದು, ಇಬ್ಬರ ಮಧ್ಯೆ ಪರಸ್ಪರ ಸ್ನೇಹ, ಆತ್ಮೀಯತೆ ಬೆಳೆದಿತ್ತು.