ಸುಳ್ಯದ ಮಸೂದ್ ಕೊಲೆ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳಿಗೂ ಜಾಮೀನು
ಮಂಗಳೂರು: ಸುಳ್ಯದ ಬೆಳ್ಳಾರೆಯಲ್ಲಿ 2022 ರ ಜುಲೈ ತಿಂಗಳಲ್ಲಿ ನಡೆದ ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಕೊಲೆ ಕೃತ್ಯ ನಡೆದಿತ್ತು. ಎಂಟು ಆರೋಪಿಗಳ ಪೈಕಿ ಅಭಿಲಾಷ್ ಮತ್ತು ಸುನಿಲ್ ಈಗ ಜಾಮೀನು ಲಭಿಸಿದೆ. ಆರು ಮಂದಿಗೆ ಈ ಮೊದಲೇ ಜಾಮೀನು ಸಿಕ್ಕಿತ್ತು.
ಜಾಮೀನು ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ, ಒಂದು ವರ್ಷದ ಮೇಲೆ ಆರೋಪಿಯಾಗಿ ಜೈಲಿನಲ್ಲಿದ್ದಾರೆಂಬ ವಾದಕ್ಕೆ ಪುರಸ್ಕರಿಸಿದ್ದಾರೆ.
ಆರೋಪಿಗಳ ಪರವಾಗಿ ಹಿರಿಯ ವಕೀಲ ಅರುಣ್ ಶಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ವಹಿದ್ದರು.
ಮಸೂದ್ ಕೊಲೆಗೆ ಪ್ರತೀಕಾರ ಎನ್ನುವಂತೆ, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಈ ಎರಡೂ ಕೃತ್ಯಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದ್ವೇಷಕ್ಕೆ ಕಾರಣವಾಗಿತ್ತು.





