ಸೌದಿ ಅರೇಬಿಯಾದಲ್ಲಿ ಹೃದಯಾಘಾತ: ಜೋಕಟ್ಟೆಯ ಯುವಕ ಇರ್ಷಾದ್ ಮೃತ್ಯು

ಮಂಗಳೂರು : ಮಂಗಳೂರು ಹೊರವಲಯದ ಜೋಕಟ್ಟೆಯ ಯುವಕ ಇರ್ಷಾದ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ದಾರುಣ ಅಂತ್ಯ ಕಂಡಿದ್ದಾರೆ.
ಜೋಕಟ್ಟೆಯ ಕೆಬಿಎಸ್‌ಸಿ ನಿವಾಸಿ ಇರ್ಷಾದ್ (33) ಸೌದಿ ಅರೆಬಿಯಾದ ಅಲ್ ಕೋಬರ್ ನಲ್ಲಿ ಮೃತಪಟ್ಟ ಯುವಕ.
ಕೆಬಿಎಸ್ ನಿವಾಸಿ ಅಬ್ದುಲ್ ರಝಾಕ್ ಅವರ ಮಗ ಇರ್ಶಾದ್ 7ವರ್ಷಗಳಿಂದ ಸೌದಿ ಅರೇಬಿಯಾದ ಅಲ್ ಕೋಬರ್ ನಲ್ಲಿ ಇಲೆಕ್ಟ್ರಾನಿಕ್ ಅಂಗಡಿಯೊಂದರಲ್ಲಿ ಕೆಲಸಕ್ಕೆ ಇದ್ದರು.
ಇತ್ತೀಚೆಗೆ ಒಂದೂವರೆ ವರ್ಷಗಳ ಹಿಂದೆ ಊರಿಗೆ ಬಂದು ತೆರಳಿದ್ದರು. ಗುರುವಾರ ಬೆಳಗ್ಗೆ ಇರ್ಶಾದ್ ಅವರಿಗೆ ತೀವೃ ತರಹದ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರ ಸ್ನೇಹಿತರು ಅಲ್ ಕೋಬರ್ ನ ಅಲ್ ಸಲಾಮ್ ಆಸ್ಪತ್ರೆಗೆ ಕರೆದೊಯ್ದಿದ್ದರು.
ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಇರ್ಶಾದ್ ಹೃದಯಾಘಾತ ಕ್ಕೊಳಗಾಗಿ ಮೃತಪಟ್ಟಿದ್ದಾಗಿ ಘೋಷಿಸಿದರು ಎಂದು ಅವರ ಕುಟುಂಬ ಮೂಲ ಮಾಹಿತಿ ನೀಡಿದೆ.
ಮೃತ ಇರ್ಶಾದ್ ವಿವಾಹಿತರಾಗಿದ್ದು, ತಂದೆ, ತಾಯಿ, ಇಬ್ಬರು ಸಹೋದರರು, ಮೂರು ಮಂದಿ ಸಹೋದರಿಯನ್ನು ಅಗಲಿದ್ದಾರೆ.