ಬೆಳ್ತಂಗಡಿ: ಬಾವಿಯಲ್ಲಿ ವಿವಾಹಿತ ಮಹಿಳೆಯ ಶವ ಪತ್ತೆ: ಕೊಲೆ ಶಂಕೆ-ಸ್ಥಳಕ್ಕೆ ಆಗಮಿಸಿದ ಪೊಲೀಸರ ತಂಡ

ಬೆಳ್ತಂಗಡಿ : ವಿವಾಹಿತ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿದ್ದು. ಕೊಲೆ ಮಾಡಿ ಬಾವಿಗೆ ಹಾಕಿರು ಆರೋಪ ಕೇಳಿಬರುತ್ತಿದ್ದು ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ , ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಮತ್ತು ತಂಡ ಭೇಟಿ ನೀಡಿದೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಚಾರಿನ ಜ್ಯೋತಿನಗರದಲ್ಲಿ ವಿವಾಹಿತ ಮಹಿಳೆ ಶಶಿಕಲಾ(25) ಅವರ ಶವ ಬಾವಿಯಲ್ಲಿ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಮಂಗಳೂರು ಎಫ್ಎಸ್ಎಲ್ ತಂಡ ಬರುವಿಕೆಗಾಗಿ ಪೊಲೀಸರು ಕಾಯುತ್ತಿದ್ದಾರೆ.
