ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ಆರಂಭ
ಹುಬ್ಬಳ್ಳಿ: ಹೊಸ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ನ.3ರಿಂದ ಆರಂಭಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ಗೆ ಈವರೆಗೆ 2 ಲಕ್ಷ 90 ಸಾವಿರ ಅರ್ಜಿಗಳು ಬಂದಿವೆ. ಇದರಲ್ಲಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಅರ್ಜಿ ಪರಿಷ್ಕರಣೆ ಮಾಡಿ ಅರ್ಹರಿಗೆ ಕಾರ್ಡ್ ವಿತರಣೆ ಮಾಡಲಾಗುವುದು. ಈಗಾಗಲೇ ಅರ್ಜಿ ಹಾಕಿಕೊಂಡು ಕಾಯುತ್ತಿರುವ ಜನರಿಗೆ ಆದಷ್ಟು ಬೇಗ ಕಾರ್ಡ್ ವಿತರಣೆ ಮಾಡುವುದು ನಮ್ಮ ಆದ್ಯತೆ ಎಂದು ಹೇಳಿದರು.





