ಮುಲ್ಕಿ: ಸರ ಸುಲಿಗೆ ಆರೋಪಿಯ ಬಂಧನ
ಉಡುಪಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಪಾವಂಜೆ ರಸ್ತೆಯಲ್ಲಿ ಮಹಿಳೆಯೋರ್ವರ ಕುತ್ತಿಗೆಯಿಂದ ಸರ ಸುಲಿಗೆ ಮಾಡಲು ಪ್ರಯತ್ನಿಸಿದ ಮತ್ತು ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಟಪಾಡಿ ಎಂಬಲ್ಲಿ ಮಹಿಳೆಯ ಕುತ್ತಿಗೆಯಿಂದ ಸರ ಸುಲಿಗೆ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದು ಲಕ್ಷಾಂತರ ಮೌಲ್ಯದ ಚಿನ್ನದ ಹವಳದ ಸರ ಮತ್ತು ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ಮಂಗಳೂರು ಮಾಲೇಮಾರ್ ಬಳಿ ವಾಸ್ತವ್ಯವಿರುವ ಮೂಲತಃ ಕೈಕಂಬ ಮಳಲಿ ನಿವಾಸಿ ವಿನಯ ಪ್ರಸಾದ್(30) ಎಂದು ಗುರುತಿಸಲಾಗಿದೆ.
ಕಳೆದ ಅ. 14ರಂದು ರಂದು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಾವಂಜೆ ಗ್ರಾಮದ ಪಾವಂಜೆಯಿಂದ ಹಳೆಯಂಗಡಿ ಕಡೆಗೆ ಹೋಗುವ ಒಳ ರಸ್ತೆಯಲ್ಲಿ ಲೀಲಾ ಎಂಬವರ ಕುತ್ತಿಗೆಯಲ್ಲಿದ್ದ ಸರವನ್ನು ಯಾರೋ ಅಪರಿಚಿತ ವ್ಯಕ್ತಿ ಸುಲಿಗೆ ಮಾಡಲು ಪ್ರಯತ್ನಿಸಿದ ಬಗ್ಗೆ ಲೀಲಾ ರವರು ನೀಡಿದ ದೂರಿನಂತೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.





