December 19, 2025

ವಿಟ್ಲ: ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ

0
image_editor_output_image-1525747107-1699098419468

ವಿಟ್ಲ: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಚಂದಳಿಕೆ ಸಿಪಿಸಿಆರ್ ಐ ಎಂಬಲ್ಲಿ ನಡೆದಿದೆ.

ಬೊಳಂತಿಮೊಗರು ನಿವಾಸಿ ಬೈಕ್ ಸವಾರ ಅಬ್ದುಲ್ ಆಸೀಫ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಹ ಸವಾರ ಇಮ್ರಾನ್ ಅಪಾಯದಿಂದ ಪಾರಾಗಿದ್ದಾರೆ.
ಇವರು ವಿಟ್ಲ ಕಡೆಯಿಂದ ಕಂಬಳಬೆಟ್ಟು ಕಡೆಗೆ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!