May 9, 2026

ಪಂಜದ ಯುವಕ ಪಾಂಡಿಚೇರಿಯಲ್ಲಿ ನೀರುಪಾಲು

0
IMG-20231106-WA0008.jpg


 
ಪುತ್ತೂರು : ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಸುಳ್ಯ ತಾಲೂಕಿನ ಪಂಜದ ಯುವಕನೊಬ್ಬ ಪಾಂಡಿಚೇರಿಯಲ್ಲಿ ಸಮುದ್ರ ಪಾಲಾದ ಘಟನೆ ಸಂಭವಿಸಿದೆ.

ಪಂಜದ ಕೂತ್ಕುಂಜ ಗ್ರಾಮದ ಚಿದ್ಗಲ್ಲು ಗೋಪಾಲ್ ಎಂಬವರ ಪುತ್ರ ಬಿಪಿನ್ ನೀರುಪಾಲಾದ ಯುವಕ.

ಬಿಪಿನ್ ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶನಿವಾರ ಗೆಳೆಯರೊಂದಿಗೆ ಪಾಂಡಿಚೇರಿಗೆ ಹೋಗಿದ್ದು ಬಳಿಕ ಅಲ್ಲಿನ ಬೀಚ್‌ಗೆ ತೆರಳಿದ್ದ ವೇಳೆ ಸಮುದ್ರಪಾಲಾಗಿದ್ದಾರೆ. ಭಾನುವಾರ ಯುವಕನ ಮೃತದೇಹ ಪತ್ತೆಯಾಗಿದೆ. ಮೃತರು ತಂದೆ, ತಾಯಿ, ಸಹೋದರಿ ರಚನಾ ಚಿದ್ಗಲ್ ರನ್ನು ಅಗಲಿದ್ದಾರೆ

Leave a Reply

Your email address will not be published. Required fields are marked *

error: Content is protected !!