February 1, 2026

ಪತ್ರಕರ್ತೆ ಗೌರಿ ಲಂಕೇಶ್‌‌ ಕೊಲೆ ಪ್ರಕರಣ:
ಆರೋಪಿ ವಿರುದ್ಧದ ಹೈಕೋರ್ಟ್‌ ಆದೇಶವನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್‌

0
image_editor_output_image1811408304-1634805304594.jpg

ನವದೆಹಲಿ: ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್‌‌ ಕೊಲೆ ಆರೋಪಿ ವಿರುದ್ದ ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಆದೇಶವನ್ನು ಗುರುವಾರ ಸುಪ್ರೀಂಕೋರ್ಟ್‌ ವಜಾಗೊಳಿಸಿದೆ.

ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್‌ ನೇತೃತ್ವದ ಪೀಠ ಅರ್ಜಿಯ ವಿಚಾರಣೆ ನಡೆಸಿದ್ದು, ಈ ಬಗ್ಗೆ ಹೈಕೋರ್ಟ್ ಆದೇಶ ಪ್ರಶ್ನಿಸಿ 2021ರ ಎಪ್ರಿಲ್‌‌ 22ರಂದು ರಾಜ್ಯ ಸರ್ಕಾರ ಹಾಗೂ ಗೌರಿ ಅವರ ಸಹೋದರಿ ಕವಿತಾ ಲಂಕೇಶ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಅನುಮತಿ ನೀಡಿದೆ.

ಕೊಕಾ ಅಡಿ ಆರೋಪಿ ಮೋಹನ್‌ ನಾಯಕ್‌ ವಿರುದ್ದ ದಾಖಲಿಸಲಾದ ಆರೋಪವನ್ನು ರದ್ದುಗೊಳಿಸಿರುವ ಕುರಿತು ಪ್ರಶ್ನಿಸಿ ಕವಿತಾ ಲಂಕೇಶ್‌ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎ ಎಂ ಖನ್ವಿಲ್ಕರ್‌ ನೇತೃತ್ವದ ತ್ರಿಸದಸ್ಯ ಪೀಠ ಪೂರ್ಣಗೊಳಿಸಿದೆ.

ಗೌರಿ ಲಂಕೇಶ್‌ ಅವರನ್ನು 2017ರ ಸೆ.5ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ಅವರ ನಿವಾಸದ ಎದುರು ಹತ್ಯೆ ಮಾಡಲಾಗಿತ್ತು.

Leave a Reply

Your email address will not be published. Required fields are marked *

error: Content is protected !!