ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ನಾಲ್ವರ ವಿರುದ್ಧ ಪ್ರಕರಣ ದಾಖಲು: ಅಪಘಾತ ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ
ಪುತ್ತೂರು : ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಅಕ್ಷಯ್ ಸ್ನೇಹಿತ ವಿಖ್ಯಾತ್ ನೀಡಿದ ದೂರಿನ ಮೇರೆಗೆ ಚೇತನ್, ಮನೀಶ್, ಮಂಜ, ಕೇಶವ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ನ.6 ರಂದು ರಾತ್ರಿ ಪುತ್ತೂರು ನೆಹರೂ ನಗರದಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಖ್ಯಾತ್ ರವರ ಗೆಳೆಯ ಅಕ್ಷಯ ಕಲ್ಲೇಗ ಹಾಗೂ ಮನೀಶ್, ಚೇತನ್ ಎಂಬವರೊಂದಿಗೆ ದೂರವಾಣಿ ಕರೆಯ ಮೂಲಕ ಮಾತಿನ ಚಕಮಕಿಯಾಗಿರುತ್ತದೆ.
ಸದರಿ ಪ್ರಕರಣ ಮುಂದುವರಿದಂತೆ, ಸ್ವಲ್ಪ ಸಮಯದ ಬಳಿಕ, ವಿಖ್ಯಾತ್ ತನ್ನ ಗೆಳೆಯನಾದ ಅಕ್ಷಯ್ ಕಲ್ಲೇಗ ನೊಂದಿಗೆ, ಪುತ್ತೂರು ನೆಹರೂ ನಗರದ ಬಳಿಯಿರುವ ಎಟಿಎಂ ಪಕ್ಕದಲ್ಲಿ ನಿಂತುಕೊಂಡ್ಡಿದಾಗ ಕಾರಿನಲ್ಲಿ ಬಂದ ಚೇತನ್, ಮನೀಶ್, ಮಂಜ ಮತ್ತು ಕೇಶವ ಎಂಬುವರುಗಳು ಅಕ್ಷಯ್ ಕಲ್ಲೇಗ ಎಂಬಾತನೊಂದಿಗೆ ದೂರವಾಣಿ ಕರೆಯ ಮೂಲಕ ನಡೆದಿದ್ದ ಮಾತಿನ ಚಕಮಕಿಯ ವಿಚಾರದಲ್ಲಿ ತಕರಾರು ತೆಗೆದು, ಅವ್ಯಾಚವಾಗಿ ಬೈದು, ತಾವುಗಳು ತಂದಿದ್ದ ತಲವಾರಿನಿಂದ ಹಲ್ಲೆ ನಡೆಸಿರುತ್ತಾರೆ.
ಈ ವೇಳೆ ವಿಖ್ಯಾತ್ ಓಡಿ ತಪ್ಪಿಸಿಕೊಂಡಿದ್ದು, ಅಕ್ಷಯ ಕಲ್ಲೇಗ ರನ್ನು ಚೇತನ್, ಮನೀಶ್, ಮಂಜ ಮತ್ತು ಕೇಶವ ಸೇರಿಕೊಂಡು ತಲವಾರಿನಿಂದ ಕಡಿದು ಕೊಲೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ.
ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ:106-2023 ಕಲಂ: 341,504,506,307,302 ಜೊತೆಗೆ 34 IPC ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.