September 20, 2024

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 4 ಮಂದಿ ಆರೋಪಿಗಳ ಸೆರೆ

0

ಪುತ್ತೂರು: ಪುತ್ತೂರಿನ ಖ್ಯಾತ ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಮಂದಿ ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ನಿವಾಸಿ ಮನೀಶ್, ಬನ್ನೂರು ಗ್ರಾಮದ ಕೃಷ್ಣನಗರ ನಿವಾಸಿ, ಬಸ್ ಚಾಲಕ ಚೇತನ್, ಪುತ್ತೂರು ಹೊರವಲಯದ ಪಡೀಲು ನಿವಾಸಿ ಕೇಶವ ಪಡೀಲು ಮತ್ತು ಮಂಜುನಾಥ ಯಾನೆ ಮಂಜು ಬಂಧಿತ ಆರೋಪಿಗಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕ್ಷುಲ್ಲಕ ಕಾರಣಕ್ಕಾಗಿ ಅಕ್ಷಯ್ ಕಲ್ಲೇಗ ಅವರನ್ನು ತಂಡವೊಂದು ಅಟ್ಟಾಡಿಸಿ ತಲವಾರಿನಿಂದ ಕಡಿದು ಕೊಲೆ ನಡೆಸಿದ ಘಟನೆ ಪುತ್ತೂರು ತಾಲೂಕಿನ ಕಬಕ ಗ್ರಾಮದ ನೆಹರೂನಗರ ಎಂಬಲ್ಲಿ ನ. 6ರ ತಡರಾತ್ರಿ ನಡೆದಿತ್ತು.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಪೈಕಿ ಪ್ರಮುಖ ಆರೋಪಿಗಳಾದ ಮನೀಶ್ ಹಾಗೂ ಚೇತನ್ ಕೊಲೆ ಮಾಡಿದ ಜಾಗದಿಂದ ನೇರವಾಗಿ ಪುತ್ತೂರು ನಗರ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದರು. ಇದೀಗ ಉಳಿದ ಇಬ್ಬರು ಆರೋಪಿಗಳಾದ ಕೇಶವ ಪಡೀಲು ಹಾಗೂ ಮಂಜುನಾಥ ಯಾನೆ ಮಂಜನನ್ನು ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪದೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!