ರಸ್ತೆ ಮಧ್ಯದಲ್ಲಿ ತೆಗೆದಿದ್ದ ಗುಂಡಿಗೆ ಬಿದ್ದು 5ನೇ ತರಗತಿಯ ವಿದ್ಯಾರ್ಥಿನಿ ಮೃತ್ಯು
ಶಿವಮೊಗ್ಗ: ರೈಲ್ವೆ ಕಾಮಗಾರಿಗಾಗಿ ರಸ್ತೆ ಮಧ್ಯದಲ್ಲಿ ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಕೋಟೆಗಂಗೂರಿನಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಚೈತ್ರಾ ಎಂದು ಗುರುತಿಸಲಾಗಿದೆ. ಮೃತ ಬಾಲಕಿ 5 ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಶಾಲೆಯಿಂದ ಬುಧವಾರ ಸಂಜೆ ಮನೆಗೆ ಬಂದಿದ್ದಳು.
ಈ ವೇಳೆ ಪೋಷಕರು ಮನೆಗೆ ಬೀಗ ಹಾಕಿಕೊಂಡು ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಹೊಲಕ್ಕೆ ಹೋಗಿ ಬೀಗ ಪಡೆದುಕೊಂಡು ವಾಪಾಸ್ ಬರುವಾಗ ಬಾಲಕಿ ರೈಲ್ವೆ ಟರ್ಮಿನಲ್ ನಿರ್ಮಾಣಕ್ಕಾಗಿ ತೆಗೆದಿದ್ದ ಗುಂಡಿಗೆ ಬಿದ್ದಿದ್ದಾಳೆ ಎಂದು ತಿಳಿದು ಬಂದಿದೆ.