March 17, 2026

ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಕಾರು: ಐವರು ಜಲಸಮಾಧಿ

0
image_editor_output_image-166051050-1699420529035.jpg

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ನಾಲೆಗೆ ಬಿದ್ದ ಪರಿಣಾಮ ಐವರು ಜಲಸಮಾಧಿ ಆಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಪಾಂಡವಪುರ ತಾಲೂಕಿನ ಬನಘಟ್ಟ ಬಳಿಯ ವಿಸಿ ನಾಲೆಯಲ್ಲಿ ದುರ್ಘಟನೆ ಸಂಭವಿಸಿದೆ.

ಭದ್ರವಾತಿ ನಿವಾಸಿಗಳಾದ ಚಂದ್ರಪ್ಪ (61), ಕೃಷ್ಣಪ್ಪ (60), ಧನಂಜಯ (55), ಬಾಬು ಹಾಗೂ ಜಯಣ್ಣ ಸಾವನ್ನಪ್ಪಿದ್ದಾರೆ.

ಮೃತರು ಇಂಡಿಕಾ ಕಾರಿನಲ್ಲಿ ಮಂಗಳವಾರ ಸಂಜೆ 4:45 ರ ವೇಳೆಯಲ್ಲಿ ಮೈಸೂರಿನಿಂದ ಭದ್ರಾವತಿ ಕಡೆಗೆ ಪ್ರಯಾಣ ಬೆಳೆಸಿದ್ದರು.

ಬನಘಟ್ಟದ ವಿಸಿ ನಾಲೆ ಸೇತುವೆ ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿದ ಕಾರು ನೇರವಾಗಿ ನಾಲೆಗೆ ಉರುಳಿಬಿದ್ದಿದೆ.

Leave a Reply

Your email address will not be published. Required fields are marked *

You may have missed

error: Content is protected !!