ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ನ.22ರವರೆಗೆ ನ್ಯಾಯಾಂಗ ಬಂಧನ
ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು ನ.8 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ನ.7 ರಂದು ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿತ್ತು. ನ.8 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ನ್ಯಾಯಾಧೀಶರು ನ.22 ರ ತನಕ ನ್ಯಾಯಾಂಗ ಕಸ್ಟಡಿಗೊಳಪಡಿಸಿ ಆದೇಶ ನೀಡಿದ್ದಾರೆ.





