ಅಮಿತ್ ಶಾ ರಥಕ್ಕೆ ವಿದ್ಯುತ್ ತಂತಿ ಸ್ಪರ್ಶ: ಅಪಾಯದಿಂದ ಪಾರು
ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿರುವ ಗೃಹ ಸಚಿವ ಅಮಿತ್ ಶಾ ಅಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ.
ಮಂಗಳವಾರ ರಾಜಸ್ಥಾನದ ನಾಗೌರ್‌ನಲ್ಲಿ ಅಮಿತ್ ಶಾ ರಥದಲ್ಲಿ ನಿಂತು ಪಕ್ಷದ ಪರ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ವಿಶೇಷವಾಗಿ ವಿನ್ಯಾಸ ಮಾಡಲಾಗಿರುವ ರಥದ ಮೇಲಿನ ಭಾಗ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ.
ರಥ ತಾಗಿದ ಕೂಡಲೇ ಕಿಡಿ ಹೊತ್ತಿಕೊಂಡಿದೆ. ಕೂಡಲೇ ರಥದ ಹಿಂದೆ ಇದ್ದ ಇತರ ವಾಹನಗಳನ್ನು ತಕ್ಷಣವೇ ನಿಲ್ಲಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಯಿತು





