ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಮಠದ ಶ್ರೀಗೆ ಷರತ್ತುಬದ್ಧ ಜಾಮೀನು
ಬೆಂಗಳೂರು: ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಶ್ರೀಗಳಿಗೆ ಏಳು ಷರತ್ತುಗಳನ್ನು ಹೈಕೋರ್ಟ್ ವಿಧಿಸಿದೆ. ಚಿತ್ರದುರ್ಗ ಮುರುಘಾ ಮಠಕ್ಕೆ ಶ್ರೀಗಳು ಪ್ರವೇಶಿಸುವಂತಿಲ್ಲ. ಪಾಸ್‌ಪೋರ್ಟ್ ಅನ್ನು ಕೋರ್ಟ್ ವಶಕ್ಕೆ ನೀಡಬೇಕು. ಇಬ್ಬರ ಶ್ಯೂರಿಟಿಗಳನ್ನು ಒದಗಿಸಬೇಕು, ಇಷ್ಟೇ ಅಲ್ಲದೆ, ಕೋರ್ಟ್ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಬೇಕು. ಇಂತಹ ಕೃತ್ಯಗಳನ್ನು ಪುನರಾವರ್ತನೆ ಮಾಡುವಂತಿಲ್ಲ ಎಂದುಹೈಕೋರ್ಟ್ ಸೂಚಿಸಿದೆ.
ಆದರೆ ಮುರುಘಾ ಶ್ರೀಗೆ ಜಾಮೀನು ಸಿಕ್ಕಿದರೂ ಸದ್ಯಕ್ಕೆ ಜೈಲಿನಿಂದ ಬಿಡುಗಡೆ ಸಾಧ್ಯವಿಲ್ಲ. ಮತ್ತೊಂದು ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಬಾಕಿ ಇದ್ದು, ಅದರಲ್ಲಿ ಜಾಮೀನು ದೊರೆಯದೆ ಅವರು ಬಿಡುಗಡೆ ಅಸಾಧ್ಯ.





