ಪುತ್ತೂರು: ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ಪ್ರಕರಣ, ಪ್ರಮುಖ ಆರೋಪಿಯ ವಿಚಾರಣೆ
ಪುತ್ತೂರು: ಪುತ್ತೂರು ತಾಲೂಕಿನ ಬಡಗನ್ನೂರಿನಲ್ಲಿ ಸೆ. 6ರಂದು ನಡೆದ ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಕೇರಳದ ಕಣ್ಣೂರು ಸೆಂಟ್ರಲ್ ಜೈಲ್ ನಿಂದ ಪುತ್ತೂರಿಗೆ ಪೋಲೀಸರು ಕರೆ ತಂದು ವಿಚಾರಣೆ ನಡೆಸಿದ್ದಾರೆ.
ಪುತ್ತೂರಿನ ಗುರುಪ್ರಸಾದ್ ಎಂಬವರಿಗೆ ಸೇರಿದ ಮನೆಯಲ್ಲಿ ಈ ದರೋಡೆ ಕೃತ್ಯ ನಡೆಸಲಾಗಿತ್ತು.
ಪ್ರಕರಣದ ಪ್ರಮುಖ ಆರೋಪಿ ರವಿ ಯಾನೆ ಪಚ್ಚಂಬಳ ರವಿಯನ್ನು ಕರೆ ತಂದು ವಿಚಾರಣೆ ನಡೆಸಲಾಗಿದೆ. ಜೈಲಿನಿಂದ ಪೆರೋಲ್ ಮೂಲಕ ಬಂದು ಕಳ್ಳತನ ನಡೆಸುತ್ತಿದ್ದ ಆರೋಪಿ ಸೇರಿದಂತೆ ಒಟ್ಟು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 6 ಆರೋಪಿಗಳನ್ನು ಬಂಧಿಸಲಾಗಿದೆ.
ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ನಡೆದ ಕಾಂಗ್ರೆಸ್ ಮುಖಂಡ ಜಬ್ಬಾರ್ ಕೊಲೆ ಪ್ರಕರಣದ ಆರೋಪಿಯಾಗಿಯೂ ರವಿ ಗುರುತಿಸಿಕೊಂಡಿದ್ದಾನೆ.
ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.





