February 23, 2026

BJP ಟಿಕೆಟ್ ಹೆಸರಿನಲ್ಲಿ ಚೈತ್ರಾ ವಂಚನೆ ಪ್ರಕರಣ: ಆರೋಪಿ ಅಭಿನವ ಹಾಲಶ್ರೀಗೆ ಜಾಮೀನು

0
image_editor_output_image-441982752-1699508151074.jpg

ಬೆಂಗಳೂರು, ನ.8: ಉದ್ಯಮಿ ಗೋವಿಂದ ಪೂಜಾರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಮೂರನೇ ಆರೋಪಿ ಹಿರೇಹಡಗಲಿಯ ಹಾಲಸ್ವಾಮಿ ಮಠದ ಶ ಅಭಿನವ ಹಾಲಶ್ರೀ ಸ್ವಾಮೀಜಿಗೆ ಹೈಕೋರ್ಟ್‌ ಜಾಮೀನು ನೀಡಿದೆ.

ಬುಧವಾರ ಹಾಲಶ್ರೀ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ ಏಕಸದಸ್ಯ ಪೀಠ ಅಭಿನವ ಹಾಲಶ್ರೀಗೆ ಷರತ್ತುಬದ್ಧ ಜಾಮೀನು ನೀಡಿದೆ.

ವಿಚಾರಣೆ ಆರಂಭದಲ್ಲಿಯೇ ಸರಕಾರಿ
ಅಭಿಯೋಜಕ ಎಸ್‌.ಎ.ಬೆಳ್ಳಿಯಪ್ಪ ಅವರು ಅರ್ಜಿದಾರರ ವಿರುದ್ಧದ ತನಿಖಾಧಿಕಾರಿ ಇಂದು ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆಂದು ಪೀಠದ ಗಮನಕ್ಕೆ ತಂದರು.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅರುಣ್‌ ಶ್ಯಾಮ್‌ ಅವರು, ಆರೋಪ ಪಟ್ಟಿ ಸಲ್ಲಿಕೆಯಾಗಿರುವುದರಿಂದ ತನಿಖೆ ಪೂರ್ಣಗೊಂಡಂತಾಗಿದೆ. ಇದರಿಂದ ಅರ್ಜಿದಾರರು ತನಿಖೆ ಎದುರಿಸುವ ಅಗತ್ಯವಿಲ್ಲವಾಗಿದೆ. ಅರ್ಜಿದಾರರು ಪಡೆದಿದ್ದಾರೆ ಎನ್ನಲಾದ ಹಣವನ್ನು ಈಗಾಗಲೇ ತನಿಖಾಧಿಕಾರಿಗಳು ಜಪ್ತಿ ಮಾಡಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ವಶಕ್ಕೆ ನೀಡಿದ್ದಾರೆ ಎಂದು ಉಲ್ಲೇಖಿಸಿದರು.

Leave a Reply

Your email address will not be published. Required fields are marked *

error: Content is protected !!