ಎಸ್‍ಬಿಐ ಬ್ಯಾಂಕ್‍ನ ಎಟಿಎಂ ಕೊರೆದು 20 ಲಕ್ಷ ರೂ. ಹಣ ದೋಚಿದ ಕಳ್ಳರು
ಚಿಕ್ಕೋಡಿ: ಎಸ್‍ಬಿಐ ಬ್ಯಾಂಕ್‍ನ ಎಟಿಎಂ ಕೊರೆದು 20 ಲಕ್ಷ ರೂ.ಗೂ ಹೆಚ್ಚಿನ ಹಣ ದೋಚಿದ ಘಟನೆ ನಗರದಲ್ಲಿ ನಡೆದಿದೆ.
ಅಂಬೇಡ್ಕರ್ ನಗರದ ಬಳಿ ಇರುವ ಎಟಿಎಂನ್ನು ಕಿಡಿಗೇಡಿಗಳು ಕಟರ್‌ನಿಂದ ಕಟ್ ಮಾಡಿದ್ದಾರೆ. ಬಳಿಕ ಅದರಲ್ಲಿದ್ದ ಹಣವನ್ನು ಕದ್ದು ಪರಾರಿಯಾಗಿದ್ದಾರೆ.
ಇದಾದ ಬಳಿಕ ನಗರದ ಇಂಡಿಯನ್ ಓವರ್‌ಸಿಸ್ ಬ್ಯಾಂಕ್‍ನ ಎಟಿಎಂ ದೋಚಲು ಯತ್ನಿಸಿದ್ದಾರೆ. ಹಣ ತೆಗೆಯಲು ಸಾಧ್ಯವಾಗದ ಕಾರಣ ಅಲ್ಲಿಂದ ವಾಪಾಸ್ ಆಗಿದ್ದಾರೆ





