ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಲ್ಲ ಎಂದು ಹೈಕಮಾಂಡ್ ಹೇಳಿತ್ತು: ಡಿ.ವಿ.ಸದಾನಂದಗೌಡ ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಯಡಿಯೂರಪ್ಪ ಸ್ಪಷ್ಟನೆ
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಲ್ಲ ಅಂತ ಹೈಕಮಾಂಡ್ ನೇರವಾಗಿ ತಿಳಿಸಿತ್ತು ಎಂದು ಡಿ.ವಿ.ಸದಾನಂದಗೌಡ ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದರು.
ನಗರದಲ್ಲಿ ಮಾತನಾಡಿದ ಅವರು, ಡಿವಿಎಸ್ ಅವರು ಚುನಾವಣಾ ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಆದರೆ ಸಕ್ರಿಯ ರಾಜಕೀಯದಲ್ಲಿ ಇರ್ತಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಕೊಡಲ್ಲ ಅಂತ ಹೈಕಮಾಂಡ್ ನೇರವಾಗಿ ತಿಳಿಸಿತ್ತು. ಅವರು ಚುನಾವಣೆಗೆ ನಿಲ್ಲಲ್ಲ. ಪಕ್ಷದ ಕಾರ್ಯಕ್ರಮದಲ್ಲಿ ಸಕ್ರಿಯರಾಗಿ ಇರಲು ಹೇಳಿದೆ. ಚುನಾವಣೆಗೆ ನಿಲ್ಲದಂತೆ ಹೈಕಮಾಂಡ್ ನೇರವಾಗಿ ಸೂಚಿಸಿದೆ ಎಂದು ಹೇಳಿದರು.





