ಅಕ್ರಮ ಗೋ ಸಾಗಾಟ ಮುಂದುವರಿಸಿದರೆ ನಾವು ಅಂಥವರನ್ನು ಬಲಿ ತೆಗೆದುಕೊಳ್ಳುತ್ತೇವೆ: ಕೆ.ಎಸ್ ಈಶ್ವರಪ್ಪ

ಉಡುಪಿ: ಶಿವಮೊಗ್ಗದಲ್ಲಿ ಗೋರಕ್ಷಕರ ಮೇಲೆ ವಾಹನ ದಾಳಿಯಲ್ಲಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕನನ್ನು ಸಚಿವ ಕೆ.ಎಸ್ ಈಶ್ವರಪ್ಪ ಭೇಟಿ ಮಾಡಿದ್ದಾರೆ. ಹಾಗೂ ಗಾಯಾಳು ಯುವಕನ ಆರೋಗ್ಯ ವಿಚಾರಿಸಿದ್ದಾರೆ.
ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಸಂಘಟನೆ ಮತ್ತು ಸರ್ಕಾರ ಗಾಯಾಳುಗಳಿಗೆ ನೆರವು ನೀಡುತ್ತದೆ. ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಸಂಪೂರ್ಣ ಭರಿಸುತ್ತೇವೆ. ಕುಟುಂಬದಿಂದ ಗಾಯಾಳುಗಳಿಗೆ ಒಂದು ಪೈಸೆಯೂ ಖರ್ಚಾಗದಂತೆ ನೋಡಿಕೊಳ್ಳುತ್ತೇವೆ ಎಂದಿದ್ದಾರೆ.
ಗೋವು ಹಂತಕರಿಗೆ ಭಯ ಹುಟ್ಟಿಸಲು ಕಾನೂನು ಜಾರಿಗೆ ತಂದಿದ್ದೇವೆ. ಶಾಸನ ಭಯ ಹುಟ್ಟಿಸಲು ಸಮರ್ಥವಾಗಿದೆ. ಪೊಲೀಸ್ ಇಲಾಖೆ ಇನ್ನಷ್ಟು ಬಿಗಿಯಾಗಬೇಕು. ಗೋವು ಹಂತಕರನ್ನು ತಡೆಯಲು ಪೊಲೀಸರಿಗೂ ಭಯ ಇದೆ. ತಮ್ಮ ಕುಟುಂಬದ ಜೊತೆ ಜೀವ ಭಯದಿಂದ ಕೆಲಸ ಮಾಡಬೇಕಾಗುತ್ತದೆ. ಪೊಲೀಸ್ ಇಲಾಖೆಗೆ ಧೈರ್ಯ ತುಂಬುವ ಕೆಲಸ ಮಾಡುತ್ತೇವೆ. ಕಾಯ್ದೆ ಗಟ್ಟಿ ಇಲ್ಲ ಎಂದಾದರೆ ಮತ್ತೆ ಬಿಗಿಗೊಳಿಸುತ್ತೇವೆ. ಬಿಜೆಪಿಗರು ಗೋವನ್ನು ತಾಯಿ ಸಮಾನವಾಗಿ ನೋಡುತ್ತದೆ ಎಂದ ಅವರು, ಅಕ್ರಮ ಮುಂದುವರಿಸಿದರೆ ನಾವು ಅಂಥವರನ್ನು ಬಲಿ ತೆಗೆದುಕೊಳ್ಳುತ್ತೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ.