February 21, 2026

ಮಂಗಳೂರು: ಸಿಸಿಬಿ ಕಾರ್ಯಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯ ಬಂಧನ

0
image_editor_output_image38734590-1699628606850.jpg


 
ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಅಕ್ರಮ ಮಾದಕ ವಸ್ತು( ಎಂಡಿಎಂಎ) ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಸಿಸಿಬಿ ಪೋಲಿಸರು ಬಂಧಿಸಿದ್ದಾರೆ.

ಆರೋಪಿ ಮೊಹಮ್ಮದ್ ಇರ್ಷಾದ್(28) ತೊಕ್ಕೊಟ್‌ ಪೆರ್ಮನ್ನೂರು ಗ್ರಾಮದ ಅಲೆಕಳ ನಿವಾಸಿ ಮೊಹಮ್ಮದ್ ಇರ್ಷಾದ್(28) ಎಂದು ಗುರುತಿಸಲಾಗಿದೆ.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯ ಭಟ್ರಗುಡ್ಡೆ ಎಂಬಲ್ಲಿ ಅಕ್ರಮವಾಗಿ ಎಂಡಿಎಂಎ ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ.
ಆರೋಪಿಯಿಂದ 70 ಸಾವಿರ ರೂ ಮೌಲ್ಯದ 12 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಐಪಿಎಸ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ರವರ ನೇತೃತ್ವದಲ್ಲಿ ಈ ಆರೋಪಿಗಳ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿಯವರು ಪಾಲ್ಗೋಂಡಿದ್ದರು.”

Leave a Reply

Your email address will not be published. Required fields are marked *

error: Content is protected !!