February 21, 2026

ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ: ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
 

0
image_editor_output_image119080917-1699635990387.jpg

ಬೆಂಗಳೂರು: ಕರ್ನಾಟಕ ಬಿಜೆಪಿ ಘಟಕದ ನೂತನ ರಾಜ್ಯಾಧ್ಯಕ್ಷನಾಗಿ ಆಯ್ಕೆಯಾಗಿರುವ ಬಿ ವೈ ವಿಜಯೇಂದ್ರ, ರಾಜ್ಯಾಧ್ಯಕ್ಷನಾಗಿ ಆಯ್ಕೆಯಾದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದು, ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕಾಂಗ ಪಕ್ಷದ ಸಭೆ ಕರೆದು, ಶಾಸಕರ ಅಭಿಪ್ರಾಯ ಪಡೆದು ವಿರೋಧ ಪಕ್ಷದ ನಾಯಕರು ಯಾರಗಬೇಕೆಂದು ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

 2024 ರ ಲೋಕಸಭಾ ಚುನಾವಣೆ ಬಹಳ ಸವಾಲಿನಿಂದ ಕೂಡಿದೆ. ಹೆಚ್ಚು ಸ್ಥಾನ ಗೆಲ್ಲಿಸುವಲ್ಲಿ ಶ್ರಮ ವಹಿಸುತ್ತೇನೆ. ಯಡಿಯೂರಪ್ಪನ ಮಗ ಎನ್ನುವ ಕಾರಣಕ್ಕೆ ನನಗೆ ಈ ಪೋಸ್ಟ್ ಕೊಟ್ಟಿಲ್ಲ .ಯಡಿಯೂರಪ್ಪನವರ ಮಗ ಎಂದು ಹೇಳಲು ನನಗೆ ಹೆಮ್ಮೆ ಇದೆ ಎಂದು ಹೇಳಿದರು.

ಪಕ್ಷದಲ್ಲಿ ಬಹುದೊಡ್ಡ ಜವಾಬ್ದಾರಿ ವಹಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ, ಗೃಹ ಸಚಿವ ಅಮಿತ್ ಶಾ ಅವರಿಗೆ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿಎಲ್ ಸಂತೋಷ್ ಅವರುಗಳಿಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿಕೃತಜ್ಞತೆಗಳನ್ನು ಸಲ್ಲಿಸಿದರು.”

Leave a Reply

Your email address will not be published. Required fields are marked *

error: Content is protected !!