February 21, 2026

ಉಡುಪಿ: ಪದ್ಮಪ್ರಿಯ ಆತ್ಮಹತ್ಯೆ ಪ್ರಕರಣ: ಆರೋಪಿ ಅತುಲ್ ರಾವ್‌ಗೆ 1 ವರ್ಷ ಜೈಲುಶಿಕ್ಷೆ

0
image_editor_output_image-805725940-1699677761343.jpg

ಉಡುಪಿ: ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್‌ಗೆ ಒಂದು ವರ್ಷ ಜೈಲುಶಿಕ್ಷೆ ವಿಧಿಸಿ ಉಡುಪಿ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ.

2008 ಜೂನ್ 10ರಂದು ಶಾಸಕ ರಘುಪತಿಭಟ್ ಪತ್ನಿ ಪದ್ಮಪ್ರಿಯ ಕರಂಬಳ್ಳಿಯ ತನ್ನ ಮನೆಯಿಂದ ನಾಪತ್ತೆಯಾಗಿದ್ದರು, ಅಂದು ರಘುಪತಿ ಭಟ್ ಅವರ ಬಾಲ್ಯ ಸ್ನೇಹಿತ, ಅದೇ ಊರಿನ ಆತುಲ್ ರಾವ್, ಮನೆಯಿಂದ ಪದ್ಮಪ್ರಿಯ ಅವರನ್ನು ಆಕೆಯ ಕಾರಿನಲ್ಲಿ ಕರೆದು ಕೊಂಡು ಹೋಗಿ ಕುಂಜಾರುಗಿರಿಯ ದಾರಿ ಮಧ್ಯೆ ಕಾರನ್ನು ಇಟ್ಟು, ಅದರ ಒಳಗೆ ಬಳೆಯ ಚೂರು, ರಕ್ತದ ಕಲೆಗಳನ್ನು ಮಾಡಿ ಅಪಹರಣದ ನಾಟಕ ಮಾಡಿದ್ದರೆಂದು ದೂರಲಾಗಿತ್ತು.

ಈ ಬಗ್ಗೆ ರಘುಪತಿ ಭಟ್ 2008ರ ಜೂ.19ರಂದು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಮಣಿಪಾಲ ಪೊಲೀಸರು ತನಿಖೆ ನಡೆಸಿ, ಬಳಿಕ ಸಿಓಡಿ ಅಧಿಕಾರಿಗಳು ತನಿಖೆ ನಡೆಸಿದ್ದರು.

Leave a Reply

Your email address will not be published. Required fields are marked *

error: Content is protected !!