ಸುರತ್ಕಲ್: ಖಾಸಗಿ ಕಾಲೇಜಿನ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವ ಗಂಭೀರ
ಸುರತ್ಕಲ್: ಖಾಸಗಿ ಕಾಲೇಜಿನ ಬಸ್ ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಕೂಳೂರು ಸೇತುವೆ ಬಳಿಯ ಕುದುರೆಮುಖ ಬಸ್ ನಿಲ್ದಾಣದ ಬಳಿ ನಡೆದಿದೆ.
ಮೃತಪಟ್ಟವರನ್ನು ಕೃಷ್ಣಾಪುರ 4ನೇ ಬ್ಲಾಕ್ ನಿವಾಸಿ ಬಶೀರ್ ಎಂದು ಗುರುತಿಸಲಾಗಿದ್ದು, ಅವರ ಅಣ್ಣ ಆಶ್ರಫ್ ಗಂಭೀರ ಗಾಯಗೊಂಡಿದ್ದು, ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಶೀರ್ ಮತ್ತು ಅವರ ಅಣ್ಣ ಅಶ್ರಫ್ ಜೋಕಟ್ಟೆಯಿಂದ ಕುದುರೆಮುಖವಾಗಿ ಕೃಷ್ಣಾಪುರಕ್ಕೆ ತಮ್ಮ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಕಾಲೇಜಿನ ಬಸ್ ಢಿಕ್ಕಿ ಹೊಡೆಯಿತೆನ್ನಲಾಗಿದೆ.





